ನ್ಯಾಯಾಲಯದ ಪ್ರಕ್ರಿಯೆಯ ಕುರಿತು ಸುಳ್ಳು ಮಾಹಿತಿ ನೀಡಿ, ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ವಕೀಲರಾದ ಪ್ರಸಾದ್ ಎಂಬವರ ವಿರುದ್ದ ದೂರು ದಾಖಲು

ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಪ್ರಸಾದ್ ಎಂಬವರ ವಿರುದ್ಧ ದೂರು ದಾಖಲಾಗಿದೆ.

ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ ಅಲಿಯಾಸ್ ಮಹಮ್ಮದ್ ಹನೀಫ್ ಎಂಬವರು ನೀಡಿದ ದೂರಿನಂತೆ, ಸೆಪ್ಟೆಂಬರ್ 28ರಂದು ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು.

ಈ ವೇಳೆ ನ್ಯಾಯಾಲಯದ ಪ್ರಕ್ರಿಯೆ ಮತ್ತು ಪ್ರಕರಣವೊಂದರ ತನಿಖೆಯ ಕುರಿತು ಸುಳ್ಳು ಮಾಹಿತಿ ಹಾಗೂ ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!