ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನೈರುತ್ಯ ಮುಂಗಾರು ಮಳೆ 150 ವರ್ಷಗಳಲ್ಲೇ ದಾಖಲೆಯ ಕೊರತೆಯೊಂದಿಗೆ ಅಂತ್ಯಗೊಂಡಿದೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ರಾಜ್ಯದಲ್ಲಿ ಸರಾಸರಿ ಶೇ.35ರಷ್ಟು ಮಳೆ ಕೊರತೆ ದಾಖಲಾಗಿದೆ.

ಜೂನ್–ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯಕ್ಕೆ ಸಾಮಾನ್ಯವಾಗಿ 852 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 551 ಮಿ.ಮೀ. ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಶೇ.36 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.31ರಷ್ಟು ಮಳೆ ಕೊರತೆ ದಾಖಲಾಗಿದೆ.
ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ ಮೈಸೂರಿನಲ್ಲಿ ಅತಿ ಹೆಚ್ಚು ಶೇ.59ರಷ್ಟು ಮಳೆ ಕೊರತೆಯಾಗಿದ್ದು, ವಿಜಯನಗರದಲ್ಲಿ ಶೇ.57, ಹಾವೇರಿಯಲ್ಲಿ ಶೇ.52, ಚಿಕ್ಕಬಳ್ಳಾಪುರ ಮತ್ತು ಕಲಬುರಗಿಯಲ್ಲಿ ತಲಾ ಶೇ.51 ಹಾಗೂ ಬಳ್ಳಾರಿ ಮತ್ತು ರಾಯಚೂರಿನಲ್ಲಿ ತಲಾ ಶೇ.49ರಷ್ಟು ಮಳೆ ಕೊರತೆ ದಾಖಲಾಗಿದೆ.


