ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಗ್ಯಾರೇಜ್‌ನಲ್ಲಿ ಇರಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆಗಸ್ಟ್ 26ರಂದು ರಾತ್ರಿ ಈ ಘಟನೆ ನಡೆದಿದ್ದು, ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಅವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಕುರಿತು ಸುಳ್ಯ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!