ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆ! ಮುಂದಿನ ದಿನದ ಹವಾಮಾನ ಹೇಗಿರಲಿದೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮಂಗಳವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕದಲ್ಲೂ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಉತ್ತರ ಒಳನಾಡು ಕರ್ನಾಟಕದಲ್ಲಿ ಬಹುತೇಕ ಒಣಹವೆ ಇರಲಿದ್ದು, ಸೋಮವಾರ ಮತ್ತು ಮಂಗಳವಾರ ಹಾವೇರಿ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!