ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಉಪ್ಪಿನಂಗಡಿ ಠಾಣೆಯ ಪಿ.ಸಿ.ಆರ್. ಕ್ರಮಾಂಕ 01/18ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಎಂಬಾತನ ವಿರುದ್ಧ ನ್ಯಾಯಾಲಯದ ವಾರಂಟ್ ಜಾರಿಯಾಗಿತ್ತು.ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ 2295 ಪ್ರವೀಣ್ ಹಾಗೂ ಪಿಸಿ ಲಿಂಗರಾಜು ಅವರು ಅಕ್ಟೋಬರ್ 6ರಂದು ಹಾಸನದಲ್ಲಿ ವಿಶ್ವನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


