ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು.ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ಕೋರ್ಟ್ ಮಹತ್ವದ ತೀರ್ಪು ನೀಡಿದ್ದಾರೆ.

ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್‌ಗಳ ಅಡಿ ಒಟ್ಟು 10 ಲಕ್ಷ ರೂ ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಮೂರು ಅತ್ಯಾಚಾರ ಪ್ರಕರಣ. 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.

2024ರ ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ಈ ಸಂಬಂಧ ದೂರು ನೀಡಿದ್ದರು ಮಹಿಳೆ ನೀಡಿದ್ದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(2)(2), 376(2)(8), 506, 354-2, 354(2), 354(2), 354(2) 233 ಸೆಕ್ಷನ್ 66 ಇ ಅಡಿ ಪ್ರಜ್ವಲ್ ರೇವಣ್ಣ ವಿರುದ್ದ ಪ್ರಕರಣ ದಾಖಲಾಗಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!