ಉಡುಪಿ: ಎರಡು ಬೈಕ್‌ಗಳ ನಡುವೆ ಅಪಘಾತ – ಇಬ್ಬರು ಸವಾರರಿಗೆ ಗಾಯ

ಉಡುಪಿ: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಕುಕ್ಕಿಕಟ್ಟೆ ಡಯಾನ–ಭಾಗ್ಯಮಂದಿರದ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತಕ್ಷಣ ಧಾವಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳನ್ನು ಸಂಗಪ್ಪ ಮತ್ತು ನವೀನ ಎಂದು ಗುರುತಿಸಲಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!