ಚಿನ್ನದ ಸರ ವಾಪಸ್ ನೀಡಿ ರಿಕ್ಷಾ ಚಾಲಕನ ಪ್ರಾಮಾಣಿಕತೆ ಮೆರೆದ ಘಟನೆ

ಅಫ್ಜಿಲಾ ಎಂಬವರು Sulthan Gold ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ, ಚಿನ್ನದ ಸರವಿದ್ದ ಬ್ಯಾಗ್ ಅನ್ನು ರಿಕ್ಷಾದಲ್ಲೇ ಮರೆತು ಬಿಟ್ಟು ತೆರಳಿದ್ದರು.

ಬ್ಯಾಗ್ ರಿಕ್ಷಾದಲ್ಲೇ ಉಳಿದಿರುವುದನ್ನು ಗಮನಿಸಿದ ರಿಕ್ಷಾ ಚಾಲಕ ಬಸವರಾಜ್ ಅವರು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಕಂಡು ಪ್ರಾಮಾಣಿಕತೆ ಮೆರೆದಿದ್ದಾರೆ.

ಯಾವುದೇ ಆಸೆಗೆ ಒಳಗಾಗದೆ, ಬ್ಯಾಗ್‌ನಲ್ಲಿದ್ದ 48 ಗ್ರಾಂ ಚಿನ್ನದ ನೆಕ್ಲೇಸ್ ಸರವನ್ನು ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಬಸವರಾಜ್ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಮ್ಮ ಬೆಲೆಬಾಳುವ ವಸ್ತುವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ್ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚಿನ್ನಕ್ಕಿಂತಲೂ ಮಿಗಿಲಾದ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಬಸವರಾಜ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!