ಅಜ್ಜಾವರ, ಅರಂತೋಡು, ಆಲೆಟ್ಟಿ, ತೊಡಿಕಾನ, ಸಂಪಾಜೆ ಗ್ರಾಮೀಣ ರಸ್ತೆ ಅಭಿವೃದ್ಧಿಗಾಗಿ ಸಚಿವ ಈಶ್ವರ ಖಂಡ್ರೆಯವರಿಗೆ ಟಿ.ಎಂ. ಶಾಹೀದ್ ಮನವಿ ಸಲ್ಲಿಕೆ

ಬೆಂಗಳೂರು:ಸುಳ್ಯ ತಾಲೂಕಿನ ಪ್ರಮುಖ ಗ್ರಾಮೀಣ ಭಾಗಗಳ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.


ಸುಳ್ಯ ತಾಲೂಕಿನ ಅಜ್ಜಾವರ, ಅರಂತೋಡು, ಆಲೆಟ್ಟಿ, ತೊಡಿಕಾನ ಹಾಗೂ ಸಂಪಾಜೆ ಗ್ರಾಮಗಳು ಪ್ರಮುಖ ಗ್ರಾಮೀಣ ಪ್ರದೇಶಗಳಾಗಿದ್ದು, ಇಲ್ಲಿ ಸರ್ವ ಧರ್ಮೀಯರು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಅಲ್ಲದೆ, ಈ ಭಾಗಗಳಲ್ಲಿ ಪ್ರಸಿದ್ಧ ದೇವಸ್ಥಾನಗಳು, ಮಸೀದಿಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿದ್ದು, ನಿತ್ಯ ನೂರಾರು ಭಕ್ತಾದಿಗಳು ಮತ್ತು ಸ್ಥಳೀಯರು ಸಂಚರಿಸುತ್ತಿದ್ದಾರೆ.


ಪ್ರಸ್ತುತ ಈ ಭಾಗಗಳ ಗ್ರಾಮೀಣ ರಸ್ತೆಗಳು ತೀವ್ರ ದುರಾವಸ್ಥೆಯಲ್ಲಿದ್ದು, ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ವಾಹನ ಸವಾರರ ದಿನನಿತ್ಯದ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಜನಸಾಮಾನ್ಯರ ಹಿತದೃಷ್ಟಿಯಿಂದ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಯ ಗಡಿ ಭಾಗವಾದ ಈ ಭಾಗದ ರಸ್ತೆಗಳ ದುರಸ್ತಿ ಹಾಗೂ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ಅಗತ್ಯವಿರುವ ಆರು ವರೆ ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಮನವಿಯಲ್ಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಉಪಸ್ಥಿತರಿದ್ದರು. ಮನವಿಯನ್ನು ಸ್ವೀಕರಿಸಿದ ಸಚಿವರು, ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!