ಪರಪ್ಪು: ಬಾವಿಗೆ ಬಿದ್ದ ಭಾರಿ ಗಾತ್ರದ ಗೂಳಿ; ಅಗ್ನಿಶಾಮಕ ದಳದಿಂದ ರಕ್ಷಣೆ

ಉಡುಪಿ: ಹಸುವನ್ನು ಅಟ್ಟಿಸಿಕೊಂಡು ಬಂದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ಭಾರಿ ಗಾತ್ರದ ಗೂಳಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆತ್ತಿದ ಘಟನೆ ಕಾರ್ಕಳ ತಾಲೂಕಿನ ಪರಪ್ಪುವಿನಲ್ಲಿ ನಡೆದಿದೆ.


ಪರಪ್ಪು ನಾಗನಕಟ್ಟೆ ನಿವಾಸಿ ರತ್ನ ಆಚಾರ್ಯ ಅವರ ಮನೆಯ ಬಾವಿಗೆ ಗೂಳಿ ಬಿದ್ದಿತ್ತು. ಹಸುವನ್ನು ಅಟ್ಟಿಸಿಕೊಂಡು ಬಂದ ಗೂಳಿ ಆಯತಪ್ಪಿ ಬಾವಿಗೆ ಬಿದ್ದಿದ್ದು, ಮೇಲಕ್ಕೆ ಬರಲಾಗದೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.
ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಸ್ಥಳೀಯರಾದ ಗಣೇಶ್ ಆಚಾರ್ಯ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ರಕ್ಷಣಾ ಕಾರ್ಯಾಚರಣೆಗೆ ಸಹಕರಿಸಿದರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಜಂಟಿ ಕಾರ್ಯಾಚರಣೆಯಿಂದ ಗೂಳಿಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆತ್ತಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!