ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನ, ರಸ್ತೆ–ಸೇತುವೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ
ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಡಿ ಕಾರ್ಯನಿರ್ವಹಿಸುವ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಅಲ್ಲದೆ, ಸ್ಥಳೀಯ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಿ, ಬಾಕಿ ಉಳಿದಿರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ವಿನಂತಿಸಿದರು.

