ಅಕ್ರಮ ಗೋಸಾಗಾಟ ಪ್ರಕರಣದ ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ.

ಪುತ್ತೂರು: ಅಕ್ರಮ ಗೋಸಾಟಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಯ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳಿಲ್ಲದೆ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಆರೋಪಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಲಾಗಿದೆ.

2026ರ ಅಕ್ಟೋಬರ್ 5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ಸಂಖ್ಯೆ 125/2026 ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಪ್ರಸಾದ್ ಎಂಬವರು ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳನ್ನು ಪಡೆಯದೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ನಿಯಮಾನುಸಾರ ಕ್ರಮ ಕೈಗೊಂಡ ಅಧಿಕಾರಿಗಳು, ಅಕ್ಟೋಬರ್ 8ರಂದು ಆರೋಪಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳು ನಡೆಯಲಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!