ದೆಹಲಿಯಲ್ಲಿ ಪೊಲೀಸ್ ವಶಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ; ಮಹಾರಾಷ್ಟ್ರದಲ್ಲಿ ಅಜ್ಜಿ ಸವಿತ್ರಿಬಾಯಿ ನಿಧನ

ಮುಂಬೈ: ಕೋಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಬಂಧನಕ್ಕೆ ಒಳಪಡಿಸಿದ ಬೆನ್ನಲ್ಲೇ, ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಅವರ ಹುಟ್ಟೂರಿನಲ್ಲಿ ಅಜ್ಜಿ ಸವಿತ್ರಿಬಾಯಿ ಶಂಕರ್ ದೀಪ್ಕೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತೂಕ್ ಪಿಂಪ್ರಿ ಗ್ರಾಮದಲ್ಲಿ ತಮ್ಮ ಕೊನೆಯ ದಿನಗಳನ್ನು ಕಳೆಯುತ್ತಿದ್ದ ಸವಿತ್ರಿಬಾಯಿ ಅವರು, ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸೇರಿದಂತೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಅಭಿಜಿತ್ ದೀಪ್ಕೆ ಅವರನ್ನು ಶನಿವಾರ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸದ್ಯ ಅವರು ಮುನ್ನೆಚ್ಚರಿಕಾ ಬಂಧನದಲ್ಲಿದ್ದಾರೆ ಎನ್ನಲಾಗಿದೆ.

ಆದರೆ, ಪೊಲೀಸರು ಅಭಿಜಿತ್ ದೀಪ್ಕೆ ಅವರನ್ನು ಎಲ್ಲಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ. ಈ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಅಜ್ಜಿಯ ಅಂತ್ಯಕ್ರಿಯೆ ಹಾಗೂ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಸ್ವಗ್ರಾಮಕ್ಕೆ ತಲುಪಲು ಸಾಧ್ಯವಾಗುತ್ತದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

SHARE
Loading spinner

Leave a Reply

Your email address will not be published. Required fields are marked *

error: Content is protected !!