ಮೂಡುಬಿದಿರೆ: ಮೂಡುಬಿದಿರೆ ಜೈನಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಸಮಾಜಸೇವಕ ಹಾಗೂ ಸಹಕಾರ ರಂಗದ ಧುರೀಣ ಡಾ. ರಾಜೇಂದ್ರ ಕುಮಾರ್ ಅವರ ಸ್ವಗೃಹಕ್ಕೆ ಭೇಟಿ ನೀಡಿ, ಆರೋಗ್ಯ ಹಾಗೂ ಕ್ಷೇಮಸಮಾಚಾರ ವಿಚಾರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಡಾ. ರಾಜೇಂದ್ರ ಕುಮಾರ್ ಅವರು ಸಮಾಜದ ಹಿತವನ್ನು ಬಯಸುವ ಹಾಗೂ ಜನಪರ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ವ್ಯಕ್ತಿಯಾಗಿದ್ದಾರೆ. ದುರ್ಬಲ ವರ್ಗಗಳ ಕಲ್ಯಾಣ, ಶೋಷಿತರು ಹಾಗೂ ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿ ಮತ್ತು ಸಹಕಾರ ಕ್ಷೇತ್ರದ ಪ್ರಗತಿಗೆ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಅವರ ಸಮಾಜಮುಖಿ ಕಾರ್ಯಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ವಿಸ್ತಾರಗೊಂಡು ಸಮಾಜದ ಅಭಿವೃದ್ಧಿಗೆ ಪೂರಕವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಡಾ. ರಾಜೇಂದ್ರ ಕುಮಾರ್ ಅವರ ಹಿರಿಯ ಸಹೋದರಿ ಇಂದಿರಾ ಕುಮಾರಿ ಹಾಗೂ ಸುನೀಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.

