
ಬೆಳ್ತಂಗಡಿ: ಸೌಜನ್ಯ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದ್ದು, ತನಿಖೆಯ ಭಾಗವಾಗಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡರ ರಕ್ತದ ಮಾದರಿ ಸಂಗ್ರಹಿಸಲು ಸಿದ್ಧತೆ ನಡೆಸಲಾಗಿದೆ.

ಈ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಕುಸುಮಾವತಿ ಗೌಡ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.


ಎಸ್‌ಐಟಿ ಅಧಿಕಾರಿ ಯೋಗೀಶ್ ಜಗಲ್ಸರ್ ಅವರ ನೇತೃತ್ವದಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಣೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಈ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಣೆ ಮಹತ್ವ ಪಡೆದುಕೊಂಡಿದೆ.


