ವಿಜೇತೋತ್ಸವ–2026: ಜಾನಪದ ನೃತ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ಶಾಲೆಗಳಿಗೆ ಮೊದಲ ಮೂರು ಬಹುಮಾನ

ಕಾರ್ಕಳ: ವಿಜಯೇತ ಶಾಲೆಯ ದಶಮಾನೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯದ ವಿಶೇಷ ಶಾಲೆಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಾಗಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆ ‘ವಿಜೇತೋತ್ಸವ–2026’ ಅನ್ನು ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು.

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ಸಂಘ, ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಫಾರ್ ಡಿಫರೆಂಟ್ಲಿ ಏಬಲ್ಡ್, ವಿಶೇಷ ವಿದ್ಯಾರ್ಥಿಗಳ ಪೋಷಕರ ಸಂಘ ಉಡುಪಿ, ಸಂಘದ ಉಡುಪಿ ಜಿಲ್ಲಾ ಘಟಕ ಹಾಗೂ ಕ್ರಿಯೇಟಿವ್ ಕಾಲೇಜು ಕಾರ್ಕಳದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳ ವಿಶೇಷ ಶಾಲೆಗಳಿಂದ ಸುಮಾರು 24 ತಂಡಗಳು ಭಾಗವಹಿಸಿ, ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಜಾನಪದ ನೃತ್ಯ ಪ್ರದರ್ಶನದ ಮೂಲಕ ಸಾಂಸ್ಕೃತಿಕ ವೈವಿಧ್ಯವನ್ನು ಅನಾವರಣಗೊಳಿಸಿದವು. ಸಂಜೆ 4.30ಕ್ಕೆ ಬಹುಮಾನ ವಿತರಣಾ ಸಮಾರಂಭ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳ ಮೂರು ತಂಡಗಳು ಸಮಾಧಾನಕರ ಬಹುಮಾನ ಪಡೆದುಕೊಂಡವು.

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಶಾಲೆಗಳು ಸ್ಪರ್ಧೆಯ ಮೊದಲ ಮೂರು ಬಹುಮಾನಗಳನ್ನು ತಮ್ಮದಾಗಿಸಿಕೊಂಡವು. ಸುರತ್ಕಲ್‌ನ ಲಯನ್ಸ್ ವಿಶೇಷ ಶಾಲೆ ಪ್ರಥಮ, ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿ ಶಾಲೆ ದ್ವಿತೀಯ ಹಾಗೂ ಕಿನ್ನಿಗೋಳಿಯ ಸೇಂಟ್ ಮೇರಿಸ್ ವಿಶೇಷ ಶಾಲೆ ತೃತೀಯ ಬಹುಮಾನ ಗಳಿಸಿದವು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ವಿಜಯೇತ ಶಾಲೆ ಕಾರ್ಕಳ ಹಾಗೂ ಸಹಕಾರ ನೀಡಿದ ಎಲ್ಲ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ಸಂಘವು ಕೃತಜ್ಞತೆ ಸಲ್ಲಿಸಿದೆ. ವಿಶೇಷವಾಗಿ ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕರು ನೀಡಿದ ಸಂಪೂರ್ಣ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!