ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಫರಂಗಿಪೇಟೆ ಎಂಬಲ್ಲಿ, ದಿನಾಂಕ 28.10.2020 ರಂದು ಸಂಜೆ, ಸ್ಟುಡಿಯೋದ ಮಾಲಿಕನಾದ ದಿನೇಶ್ ಎಂಬವರು ತನ್ನ ಸ್ಟುಡಿಯೋದಲ್ಲಿದ್ದಾಗ ಪೂರ್ವಧ್ವೇಶದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಸ್ಟುಡಿಯೋಗೆ ಬಂದು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುತ್ತಾರೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2020 ಕಲಂ: ಕಲಂ: 307.324.326.504.506 ಜೊ 34 ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿರುತ್ತದೆ.




ಸದ್ರಿ ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಮ್ ಎಸ್ ರವರು ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ ಎಂಬವರುಗಳನ್ನು ದಸ್ತಗಿರಿ ಮಾಡಿ ಸದ್ರಿ ಆರೋಪಿಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ. ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಂಗಳೂರಿನಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಜಗದೀಶ್ ವಿ.ಎನ್ ರವರು ದಿನಾಂಕ 28.10.2026 ರಂದು ನಾಲ್ವರು ಆರೋಪಿಗಳಿಗೂ 7 ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ದಂಡ ವಿಧಿಸಿರುತ್ತದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ನಾಯಕ್ ರವರು ವಾದಿಸಿರುತ್ತಾರೆ.

