ಉಡುಪಿ: ಬಾಡಿಗೆ ಮನೆಯ ಠೇವಣಿ ವಿವಾದ: ಎಂಬ್ರಾಯ್ಡರಿ ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣವನ್ನು ಹಿಂದಿರುಗಿಸಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲೀಕನ ಮೇಲೆ ಅಕ್ಕಸಾಲಿಗನೊಬ್ಬ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ನಡೆದಿದೆ.


ಆರೋಪಿ ಸುರೇಶ್ ಆಚಾರ್ಯ ಎಂಬಾತ ಆಸಿಡ್ ಹಿಡಿದು ಅಂಗಡಿಗೆ ನುಗ್ಗಿ ಮಾಲೀಕ ನವೀನ್ ಕುಮಾರ್ ಅವರ ಮೇಲೆ ಎರಚಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಇಂದ್ರಾಳಿ ಬುಡ್ನಾರಿನ ನಿವಾಸಿ ನವೀನ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಡಿಗೆ ಮನೆಯ ಠೇವಣಿ ಹಣವನ್ನು ಹಿಂದಿರುಗಿಸುವ ವಿಚಾರದಲ್ಲಿ ಉಂಟಾದ ವಿವಾದವೇ ದಾಳಿಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಸುರೇಶ್ ಆಚಾರ್ಯನನ್ನು ಬಂಧಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!