ಸುರತ್ಕಲ್: ನಗರದ ಹೊಸಬೆಟ್ಟುವಿನಲ್ಲಿ ಆತ್ಮಹತ್ಯೆಗೆ ಶರಣಾದ ಸೋಮನಾಥ್ ಪುತ್ರನ್ ಅವರ ಮನೆಗೆ ವಿಶ್ವ ಹಿಂದೂ ಪರಿಷತ್ ಮುಖಂಡರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ವಿಶ್ವ ಹಿಂದೂ ಪರಿಷತ್‌ನ ಶರಣ್ ಪಂಪ್ವೆಲ್ ಅವರ ನೇತೃತ್ವದಲ್ಲಿ ನಡೆದ ಭೇಟಿಯ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ ಸಂಚಾಲಕ ಪುನೀತ್ ಅತ್ತಾವರ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮನೋಹರ್ ಸುವರ್ಣ, ಜಯರಾಮ್ ಆಚಾರ್ಯ, ಗಿರೀಶ್ ಕರ್ಕೇರ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಪ್ರಖಂಡದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಶರಣ್ ಪಂಪ್ವೆಲ್, ಸೋಮನಾಥ್ ಪುತ್ರನ್ ಅವರ ಸಾವಿನ ಕುರಿತು ಜಿಲ್ಲಾಡಳಿತ ತಕ್ಷಣ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪ್ರಕರಣದಲ್ಲಿ ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಸೋಮನಾಥ್ ಪುತ್ರನ್ ಅವರ ಸಾವಿನ ಪ್ರಕರಣದಲ್ಲಿ ಸತ್ಯಾಂಶ ಹೊರಬಂದು ಕುಟುಂಬಕ್ಕೆ ನ್ಯಾಯ ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

