ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆ

ಬೆಂಗಳೂರು: ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪರಿಷ್ಕೃತ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಲಿನ ದರ ಹೆಚ್ಚಳದಿಂದ ಲಭಿಸುವ 8 ರೂಪಾಯಿಗಳಲ್ಲಿ 7 ರೂಪಾಯಿಗಳನ್ನು ಹಾಲು ಉತ್ಪಾದಕರಿಗೆ ಹಾಗೂ 1 ರೂಪಾಯಿಯನ್ನು ಕರ್ನಾಟಕ ಹಾಲು ಮಹಾಮಂಡಳಿಗೆ (ಕೆಎಂಎಫ್) ನೀಡಲಾಗುವುದು.

ಪ್ರಸ್ತುತ ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡಲಾಗುತ್ತಿರುವ 35 ರೂಪಾಯಿಗಳನ್ನು 42 ರೂಪಾಯಿಗಳಿಗೆ ಹೆಚ್ಚಿಸಲಾಗುತ್ತದೆ. ಇದರೊಂದಿಗೆ ಸರ್ಕಾರದ 5 ರೂಪಾಯಿ ಪ್ರೋತ್ಸಾಹ ಧನ ಸೇರಿ ರೈತರಿಗೆ ಪ್ರತಿ ಲೀಟರ್‌ಗೆ ಒಟ್ಟು 47 ರೂಪಾಯಿ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿತ್ತು. ಆದರೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿತ್ತು. ಇದೀಗ ಚುನಾವಣಾ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ದರ ಏರಿಕೆಗೆ ಅಂತಿಮ ಒಪ್ಪಿಗೆ ದೊರೆತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!