ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣ: ಹೊಸ SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ಹೊಸದಾಗಿ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮುಖ್ಯಸ್ಥರನ್ನಾಗಿ ಐಪಿಎಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

SIT ಸದಸ್ಯರನ್ನಾಗಿ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀನಿಧಿ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಶಶಿಕುಮಾರ್ ಅವರನ್ನು SIT ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತ್ತು. ಇದೀಗ ಅವರ ಬದಲಿಗೆ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.

ಉಳಿದಂತೆ ಈ ಹಿಂದಿನ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರಾಜ್ಯ ಸರಕಾರದ ಪ್ರಕಟಣೆ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!