2026 ನೇ ಸಾಲಿನ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕಲಾವಿದ ಝುಬೇರ್ ಖಾನ್ ಕುಡ್ಲ ಇವರು “ಲಲಿತ ಕಲೆ” ವಿಭಾಗದಲ್ಲಿ ಆಯ್ಕೆ

ಕಲಾವಿದ ಝುಬೇರ್ ಖಾನ್ ಕುಡ್ಲ ರವರು ಚಿತ್ರಕಲಾವಿದನಾಗಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕಲಾಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುತ್ತಾರೆ .ಮಾಜಿ ರಾಷ್ಟ್ರಪತಿ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ಅವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇತರು ರಾಜಾ ರವಿವರ್ಮ ಅಂತರಾಷ್ಟ್ರೀಯ ಗೋಲ್ಡ್ ಮೆಡಲ್, ಎಮ್.ಎಫ್.ಹುಸೈನ್ ಅಂತರಾಷ್ಟ್ರೀಯ ಪ್ರಶಸ್ತಿ,ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಹಾಗೂ ಇನ್ನೂ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ.

ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ತುಳುನಾಡಿನ ಸಮಗ್ರ ತುಳು ಕಲಾ ಸಂಸ್ಕೃತಿಯನ್ನು ಪ್ರದರ್ಶಿಸಿ ತನ್ನ ತುಳು ಅಭಿಮಾನವನ್ನು ಮೆರೆದಿರುವರು. ದುಬೈನಲ್ಲಿ ವಿಶ್ವ ಬ್ಯಾರಿ ಸಮ್ಮೇಳನದಲ್ಲೂ ಕಲಾ ಪ್ರದರ್ಶನಗೊಂಡಿರುತ್ತದೆ.

300ಕ್ಕೂ ಹೆಚ್ಚು ಮಕ್ಕಳ ಶೈಕ್ಷಣಿಕ ಕಾರ್ಯಾಗಾರಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುವ ಇವರು ಪ್ರಸ್ತುತ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾಶಿಕ್ಷಕರಾಗಿ ಸೇವೆಸಲ್ಲಿಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!