ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ 2026- 27 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಂಗಳೂರಿನ ನೆಹರು ಮೈದಾನದಲ್ಲಿ ನವೆಂಬರ್ 1ರಂದು ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.


ಸಂಸದರಾದ ಬ್ರಿಜೇಶ್ ಚೌಟರವರು ಹಾಗೂ ಶಾಸಕರಾದ ವೇದವ್ಯಾಸ. ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ .ಡಿ .ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ ಶ್ರೀನಾಥ್ ,ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾದ ವಿಶ್ವಾಸ್ ಕುಮಾರ್ ದಾಸ್ ಹಾಗೂ ವಿವಿಧ ನಿಗಮಗಳ ಅಧ್ಯಕ್ಷರು ವಿವಿಧ ಅಕಾಡೆಮಿಗಳ ಅಧ್ಯಕ್ಷರು . ಜಿಲ್ಲಾಧಿಕಾರಿಗಳಾದ ದರ್ಶನ್ ಸರ್, ಆಯುಕ್ತರಾದ ರಾಹುಲ್ ರತ್ನಪಾಂಡೆ,ಸರ್ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ,ಸರ್,ಪೊಲೀಸ್ ಆಯುಕ್ತರದ ಸುಧೀರ್ ಕುಮಾರ್ ರೆಡ್ಡಿ,ಸರ್, ಉಪಸ್ಥಿತರಿದ್ದರು . ಡಾ.ಮಾಲತಿ ಶೆಟ್ಟಿ ಮಾಣೂರುರವರು ಕಳೆದ 22 ವರುಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆ, ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ಕಳೆದ 13 ವರುಷಗಳಿಂದ ನಡೆಸುತ್ತಿದ್ದಾರೆ. 9 ಕೃತಿಗಳನ್ನು ಬರೆದಿದ್ದಾರೆ. ಪತ್ರಿಕೆಯ ವತಿಯಿಂದ ಹಿರಿಯ ಕಿರಿಯ ಲೇಖಕರ 49 ಕೃತಿಗಳನ್ನು ಸರಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ.

ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳಿಗೆ ಸಾಹಿತ್ಯ ಅಭಿರುಚಿ ಮೂಡಿಸುವ ಸಲುವಾಗಿ 120 ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿದ್ದಾರೆ .ಹಿರಿಯ ಯಕ್ಷಗಾನ ಕಲಾವಿದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ಅವರ ಸುಪುತ್ರಿ .ಪತಿ ಸತ್ಯ ಪ್ರಕಾಶ್ ಶೆಟ್ಟಿ ಜೊತೆ ವೈದ್ಯನಾಥ ನಗರ ಅತ್ತಾವರ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ.

