ಕಾರವಾರದಲ್ಲಿ ನ.6ರಂದು ಪ್ರಸಾದ್ ನೇತ್ರಾಲಯದ ನೂತನ ಕೇಂದ್ರ ಉದ್ಘಾಟನೆ

ಕಾರವಾರ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೂತನ ಕೇಂದ್ರವು ನ.6ರಂದು ಕಾರವಾರದಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರವಾರದ ಡಾ. ಪಿಕಳೆ ರಸ್ತೆಯಲ್ಲಿರುವ ಹಳೆಯ ಕೊಂಕಣ ಮೆಡಿಕಲ್ ಸೆಂಟರ್ ಕಟ್ಟಡದಲ್ಲಿ ನೂತನ ಕೇಂದ್ರ ಸ್ಥಾಪನೆಯಾಗಿದ್ದು, ಅಂದು ಮಧ್ಯಾಹ್ನ 12.05ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ದೀಪಪ್ರಜ್ವಲನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಕೇಂದ್ರ ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆ ವಹಿಸಲಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರವಾರ ಧರ್ಮಪ್ರಾಂತ್ಯದ ಬಿಷಪ್ ಡಾ. ಡುಮಿಂಗ್ ಡಯಾಸ್ ಹಾಗೂ ಕರ್ನಾಟಕ ರಾಜ್ಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ್, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ. ಉಳ್ವೇಕರ್, ವಿಧಾನ ಪರಿಷತ್ ಸದಸ್ಯ ಸಿದ್ದಲಿಂಗಪ್ಪ ಸಂಕನೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಮನಿ ಹಾಗೂ ಕಾರವಾರದ ನ್ಯೂ ನರ್ಸಿಂಗ್ ಹೋಮ್‌ನ ಡಾ. ಎಸ್.ಆರ್. ನಾಯಕ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಪ್ರಸಾದ್ ನೇತ್ರಾಲಯ ಸಮೂಹದ ಸಂಸ್ಥಾಪಕ ಡಾ. ಕೃಷ್ಣ ಪ್ರಸಾದ್ ಕುಡ್ಲು, ಆಡಳಿತ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್ ಕೂಡ್ಲು ಹಾಗೂ ನಿರ್ದೇಶಕರಾದ ಡಾ. ನಿರಂಜನ್ ಆರ್., ಡಾ. ಮೇಘಾ ಎಂ. ದಿವಾಕರ್ ಮತ್ತು ಡಾ. ಶರತ್ ಎಸ್. ಹೆಗ್ಡೆ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸರ್ವರನ್ನು ಆಹ್ವಾನಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!