ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಇಂದು ಬಜ್ಪೆಯಲ್ಲಿ ಬೃಹತ್ ಪ್ರತಿಭಟನೆ

ಬಜ್ಪೆ: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳು ಹೊಂಡಗುಂಡಿಗಳಿಂದ ಕೂಡಿರುವುದನ್ನು ಖಂಡಿಸಿ, ರಸ್ತೆ ದುರಸ್ತಿ ಹಾಗೂ ಸುಸಜ್ಜಿತ ಡಾಮರೀಕರಣಕ್ಕೆ ಆಗ್ರಹಿಸಿ ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಇಂದು (ನ.6) ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇಂದು ಸಂಜೆ 4 ಗಂಟೆಗೆ ಬಜ್ಪೆ ಚೆಕ್‌ಪೋಸ್ಟ್ ಬಳಿ ಪ್ರತಿಭಟನೆ ನಡೆಯಲಿದೆ. ರಸ್ತೆಗಳ ದುಸ್ಥಿತಿಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ವೇದಿಕೆ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವೇದಿಕೆ ಮನವಿ ಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!