ಕಾರವಾರದಲ್ಲಿ ಪ್ರಸಾದ್ ನೇತ್ರಾಲಯದ ನೂತನ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ಕಾರವಾರ: ನಗರದ ಡಾ. ಪಿಕಳೆ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಶುಕ್ರವಾರ ಸಂಭ್ರಮದಿಂದ ನಡೆಯಿತು.

ಶ್ರೀ ಸೋದೆ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರು ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು, ಆಸ್ಪತ್ರೆಯು ಅತ್ಯುತ್ತಮ ವೈದ್ಯಕೀಯ ಸೇವೆಯ ಮೂಲಕ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿ ಹಾಗೂ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರು ಆಸ್ಪತ್ರೆಯ ಆರಂಭಕ್ಕೆ ಅಭಿನಂದನೆ ಸಲ್ಲಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಅತ್ಯಾಧುನಿಕ ಯಂತ್ರೋಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯಿಂದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಉತ್ತಮ ನೇತ್ರ ಚಿಕಿತ್ಸೆಯನ್ನು ಸ್ಥಳೀಯವಾಗಿಯೇ ಪಡೆಯಲು ಅನುಕೂಲವಾಗಲಿದೆ ಎಂದರು. ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದೊಂದಿಗೆ ಗುಣಮಟ್ಟದ ನೇತ್ರ ಆರೈಕೆಯನ್ನು ಜನರಿಗೆ ತಲುಪಿಸುವ ಈ ಪ್ರಯತ್ನಕ್ಕೆ ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಪ್ರಸಾದ್ ನೇತ್ರಾಲಯದ ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಆಸ್ಪತ್ರೆಯ ನಿರ್ದೇಶಕರು, ವೈದ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

ಕಾರವಾರ ಹಾಗೂ ಸುತ್ತಮುತ್ತಲಿನ ಭಾಗದ ಜನರಿಗೆ ಸುಧಾರಿತ ನೇತ್ರ ಚಿಕಿತ್ಸೆ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಪ್ರಸಾದ್ ನೇತ್ರಾಲಯದ ನೂತನ ಕೇಂದ್ರವು ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!