ನಾಳದಲ್ಲಿ ‘ಗೋಸಮ್ಮಾನ್ ಆಹ್ವಾನ ಅಭಿಯಾನ’ಕ್ಕೆ ಸಹಿ ಸಂಗ್ರಹ

ನಾಳ: ‘ವೀರಕೇಸರಿ’ ವತಿಯಿಂದ ಆಯೋಜಿಸಲಾಗುತ್ತಿರುವ ದೀಪಾವಳಿ ಉತ್ಸವದ ಅಂಗವಾಗಿ ನಡೆದ ಆಟೋಟ ಸ್ಪರ್ಧೆಗಳ ಸಂದರ್ಭದಲ್ಲಿ ‘ಗೋಸಮ್ಮಾನ್ ಆಹ್ವಾನ ಅಭಿಯಾನ’ದ ನಿಮಿತ್ತ ಸಹಿ ಸಂಗ್ರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗೋಸಮ್ಮಾನ್ ಅಭಿಯಾನದ ಬೆಳ್ತಂಗಡಿ ತಾಲೂಕು ಸಮಿತಿ ಸಂಯೋಜಕರಾದ ಕೇಶವ ಬಂಗೇರ ಅವರ ನೇತೃತ್ವದಲ್ಲಿ ಸಹಿ ಸಂಗ್ರಹ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಭಿಯಾನದ ಜಿಲ್ಲಾ ಸಹ-ಪ್ರಭಾರಿ ಅಶೋಕ ಇಳಂತಿಲ, ವೀರಕೇಸರಿ ಸಮಿತಿಯ ಸದಸ್ಯರು ಹಾಗೂ ಊರಿನ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದು, ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

ದೀಪಾವಳಿ ಉತ್ಸವದ ಸಂಭ್ರಮದ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯರು ಭಾಗವಹಿಸುವ ಮೂಲಕ ಅಭಿಯಾನದ ಬಗ್ಗೆ ತಮ್ಮ ಆಸಕ್ತಿ ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!