ಮನೆಯ ಆವರಣ ಗೋಡೆಗೆ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಸ್ಕೂಟರ್ -ಸವಾರ ಸಾವು

ಉಳ್ಳಾಲ, ಆ. 13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ಈ ಅವಘಡ ನಡೆದಿದೆ.ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದು, ತೀವ್ರ ರಕ್ತಸ್ರಾವ ಉಂಟಾಗಿದೆ. ಆಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!