ಬೆಂಗಳೂರು:* ಶಿಕ್ಷಣ, ಸಾಹಿತ್ಯ, ಸಂಘಟನೆ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರಸಕ್ತ ಸಾಲಿನ ಗಂಧದಗುಡಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಜನತಾಪ್ರಭ ದಿನಪತ್ರಿಕೆ ಹಾಗೂ ನ್ಯಾಷನಲ್ ಮೀಡಿಯಾ ಮಾಸ್ಟರ್ಸ್ ಅಸೋಸಿಯೇಷನ್, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ಕನಕದಾಸರ ಜಯಂತಿ ಅಂಗವಾಗಿ ನವೆಂಬರ್ 29ರ ಭಾನುವಾರ ಬೆಂಗಳೂರಿನ ಜಯನಗರದ ಜೆಎಸ್ಎಸ್ ಕ್ಯಾಂಪಸ್ನ ಚಿಂತನ ಮಂಟಪದಲ್ಲಿ ನಡೆಯಲಿರುವ ಮೂರನೇ ವರ್ಷದ ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಜನತಾಪ್ರಭ ಸಂಪಾದಕ, ಚೇತನ ಫೌಂಡೇಶನ್ ಧಾರವಾಡದ ಅಧ್ಯಕ್ಷ ಹಾಗೂ ಗಂಧದಗುಡಿ ಕನ್ನಡ ಸಂಘದ ರಾಜ್ಯಾಧ್ಯಕ್ಷ ಡಾ. ಚಂದ್ರಶೇಖರ ಮಾಡಲಗೇರಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಿಕ್ಷಣ, ಸಾಹಿತ್ಯ, ಸಂಘಟನೆ ಮತ್ತು ಸಮಾಜ ಸೇವೆಯಲ್ಲಿ ಸಲ್ಲಿಸಿರುವ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

