ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು.

“ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳ ಜೊತೆ ಮೊಟ್ಟ ಮೊದಲ ಸಭೆ ನಡೆಸಲಾಯಿತು. ಅಧಿಕಾರಿಗಳೂ ಸಹ ಸಭೆಯಲ್ಲಿ ಹಾಜರಿದ್ದರು. ಪರಿಹಾರೋಪಾಯಗಳ ಬಗ್ಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ” ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!