ಓಣಂ ಹಬ್ಬ ಸನಿಹ ಹಿನ್ನಲೆ ಬೆಂಗಳೂರು ಮತ್ತು ಕೇರಳ ನಡುವೆ ಹೆಚ್ಚುವರಿ 90 ಬಸ್ ಸಂಚಾರ.

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆ ಮಾಡಿದೆ . ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ಪ್ರಮುಖ ನಗರಗಳಿಗೆ 90 ಕ್ಕೂ ಅಧಿಕ ಬಸ್ ಸೇವೆಗಳನ್ನು ನಿಗಮ ನಿರ್ವಹಿಸಲು ತೀರ್ಮಾನಿಸಿದೆ. ಓಣಂ ಹಬ್ಬದ ಹಿನ್ನಲೆಯಲ್ಲಿ ಊರಿಗೆ ಹೊರಡುವ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು, ಸುಗಮ ಸಂಚಾರವನ್ನು ಕಲ್ಪಿಸಲು ಈ ನಿಲುವನ್ನು ತೆಗೆದುಕೊಳ್ಳಲಾಗಿದೆ.

ಈ ಹೆಚ್ಚುವರಿ ಬಸ್‌ಗಳು ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಬಸ್ ಟರ್ಮಿನಲ್‌ಗಳಿಂದ ಹೊರಡಲಿವೆ. ಈ ಬಸ್‌ಗಳು ಕೇರಳದ ಕಣ್ಣೂರು, ಕೋಝಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ ಮತ್ತು ತಿರುವನಂತಪುರಂನಂತಹ ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ನಿಯಮಿತ ಬಸ್‌ಗಳಿಗೆ ಪೂರಕವಾಗಿ ಈ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಹಬ್ಬದ ಮುಗ್ಗಟ್ಟಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ಕೆಎಸ್‌ಆರ್‌ಟಿಸಿ ಮೂಲಗಳು ಹೇಳುವಂತೆ , ಓಣಂ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಬೇಡಿಕೆ ನಿರೀಕ್ಷೆ ಇರುವುದರಿಂದ, ಸಾರ್ವಜನಿಕರು ಮುಂಚಿತವಾಗಿ ಟಿಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳುವುದು ಉತ್ತಮ. ಈ ಸೇವೆಗಳ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಟಿಕೆಟ್ ಬುಕ್ಕಿಂಗ್‌ಗಾಗಿ ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್ ಅಥವಾ ಮೊಬೈಲ್ ಆಪ್‌ ಅನ್ನು ಬಳಸಬಹುದು.

SHARE
Loading spinner

Leave a Reply

Your email address will not be published. Required fields are marked *

error: Content is protected !!