ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನ ಬಹುಕಾಲದ ಬೇಡಿಕೆಯ ಎಂಬಿಬಿಎಸ್ ವಿಷಯಕ್ಕೆ ಚಾಲನೆ ನೀಡಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಜನರ ಬಹುಕಾಲದ ಕಾತರಕ್ಕೆ ಇಂದು ತೆರೆ ಬಿದ್ದಿದೆ . ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಧ್ಯಯನ ವಿಷಯ ಆರಂಭಗೊಂಡಿದ್ದು ವಿದ್ಯಾರ್ಥಿಗಳಲ್ಲಿ ಸಂತಸವನ್ನು ಮೂಡಿಸಿದೆ .

ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉಕ್ಕಿನಡ್ಕದಲ್ಲಿರುವ ಮೆಡಿಕಲ್ ಕಾಲೇಜು ಕಟ್ಟಡದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ನೆರವೇರಿಸಿದರು .ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು.ಜಿಲ್ಲಾಧಿಕಾರಿ ಇಂಬ ಶೇಖರ್ ಸ್ವಾಗತಿಸಿದರು. ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್,ಉದುಮ ಶಾಸಕ ಸಿ.ಎಚ್.ಕುಂಞಂಬು, ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖ‌ರ್ ಜೆ.ಎಸ್, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಎಂ.ಅಬ್ಬಾಸ್, ಜಿ.ಪಂ.ಸದಸ್ಯ ಶಾನವಾಸ್ ಪಾದೂರು, ಆರೋಗ್ಯ ಇಲಾಖಾ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!