ಸ್ವೀಕರ್ ಯು ಟಿ ಖಾದರ್ ಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.

ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಹಿತ ಮೂವರು ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರೊಂದಿಗೆ ಯು.ಟಿ.ಖಾದರ್ ಅವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.

ಅಕ್ಟೋಬರ್.8ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗಲಿರುವ ಘಟಿಕೋತ್ಸವದಲ್ಲಿ ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನೆ ಮಾಡಲಾಗುವುದು. ಕರ್ನಾಟಕ ರಾಜ್ಯಪಾಲರೂ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಯಾಗಿರುವ ಥಾವರ್ ಚಂದ್ ಗೆಹೋಟ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಭಾಗವಹಿಸುವ ಡಿ.ಆರ್.ಡಿ.ಎಲ್. ನ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು.

SHARE
Loading spinner

Leave a Reply

Your email address will not be published. Required fields are marked *

error: Content is protected !!