ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥ ನಾಶಪಡಿಸಿದ ಪೊಲೀಸರು.

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕಿಲೋ 937 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ. ಎಂಬಲ್ಲಿ ನಾಶಪಡಿಸಲಾಯಿತು.ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427/- ಆಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಪಾಲ್ಗೊಂಡಿದ್ದರು.

ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!