ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲನ ಕೃತ್ಯ ಖಂಡಿಸಿ ಅಂಬೇಡ್ಕರ್ ಯುವಸೇನೆಯಿಂದ ಪ್ರತಿಭಟನೆ.

ಉಡುಪಿ: ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ಕೃತ್ಯ ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ವತಿಯಿಂದ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಕೀಲ ರಾಕೇಶ್ ಕಿಶೋರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಗುರಿಯಾಗಿಸಿ ಶೂ ಎಸೆದ ಸನಾತನಿ ವಕೀಲ ರಾಕೇಶ್ ಕಿಶೋರ್‌ನನ್ನು ಭಾರತದಿಂದ ತಕ್ಷಣ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.


ಭಾರತದ ಆಡಳಿತ ವ್ಯವಸ್ಥೆ ಇರುವುದು ಧಾರ್ಮಿಕ ಗ್ರಂಥಗಳ ಆಧಾರದ ಮೇಲಲ್ಲ. ಬದಲಾಗಿ ಈ ದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ. ನ್ಯಾಯಮೂರ್ತಿ ಗವಾಯಿಯವರ ಮೇಲೆ ಶೂ ಎಸೆದ ಈ ದಾಳಿಯನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದ ಜಯನ್ ಮಲ್ಪೆ, ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಘೋರ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚಿಂತಕ ಡಾ. ಗಣನಾಥ ಎಕ್ಕಾರು, ಹಿರಿಯ ದಲಿತ ಮುಖಂಡ ಶೇಖರ ಹೆಜಮಾಡಿ, ದಸಂಸ ಭೀಮವಾದದ ರಾಜ್ಯ ಸಂಘಟನಾ ಸಂಚಾಲಕ ಶೇಖರ ಹಾವಂಜೆ, ದಲಿತ ಹಕ್ಕುಗಳ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು, ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿದರು.


ಪ್ರತಿಭಟನೆಯಲ್ಲಿ ಮಹಾಬಲ ಕುಂದರ್, ಚಾರ್ಲ್ಸ್ ಅಂಬ್ಲರ್, ಇದ್ರಿಸ್ ಹೂಡೆ, ಕೃಷ್ಣ ಬಂಗೇರ, ಲಕ್ಷ್ಮಣ ಬೈಂದೂರು, ರಾಮ ಮಯ್ಯಾಡಿ, ಹರೀಶ್ ಸಲ್ಯಾನ್, ಯುವರಾಜ್ ಪುತ್ತೂರು, ವಸಂತ ಪಾದೆಬೆಟ್ಟು, ದಯಾಕರ್ ಮಲ್ಪೆ, ಮಾಧವ ಕರ್ಕೇರ, ಸಾಧು ಚಿಟ್ಪಾಡಿ, ಧನಂಜಯ, ರವಿರಾಜ್ ಲಕ್ಷ್ಮಿನಗರ, ವಿಶ್ವನಾಥ ಹಾಳೇಕಟ್ಟೆ, ಶೋಭಾ ನಾಯ್ಕ್, ಶರತ್ ಶೆಟ್ಟಿ ತೆಂಕನಿಡಿಯೂರು, ಕಮಲ್ ಮಲ್ಪೆ, ಪುಷ್ಪ ಆಂಚನ್, ಸತೀಶ್ ಕಪ್ಪೆಟ್ಟು, ಸಂತೋಷ್ ಮೂಡುಬೆಟ್ಟು ದಾಮೋದರ ನಾಯ್ಕ, ಧನಪಾಲ್, ವಿನಯ ಕೊಡಂಕೂರು ಮುಂತಾದವರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!