ಉಡುಪಿ: ಉಡುಪಿ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರು ನಲ್ಲಿರುವ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.