ಉಡುಪಿ: ಮಣಿಪಾಲ ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕೊಳತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು, ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ.
ಇವರು ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಂದ ಮಣಿಪಾಲ ಪೋಲಿಸ್ ಠಾಣೆಯ ಎಎಸ್ ಐ ವಿಜಯ್, ಸಿಬ್ಬಂದಿ ಶಶಿಧರ್, ಸುರೇಶ್ ಶೆಟ್ಟಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕೊಳೆತ ಕಳೇಬರವನ್ನು ಪ್ಲಾಸ್ಟಿಕ್ ಹೊದಿಕೆಯಲ್ಲಿ ಭದ್ರಗೊಳಿಸಿ, ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ವ್ಯವಸ್ಥೆಗೊಳಿಸುವ ಮೂಲಕ ಠಾಣೆಗೆ ಸಹಕರಿಸಿದರು.