ಉಡುಪಿ: ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ಇಂದು ಸಂಭವಿಸಿದೆ.
ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕ. ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾನೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.