ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಸತ್ಯವನ್ನು ಬೆಳಕಿಗೆ ತರುವ ಉದ್ದೇಶದಿಂದ “ಕೊಂದವರು ಯಾರು?” ಅಭಿಯಾನವನ್ನು ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸದಸ್ಯೆಯರು ಘೋಷಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ದಹಲಿಯ ನಿರ್ಭಯಾ ಪ್ರಕರಣ ನಡೆದ ದಿನವಾದ ಡಿಸೆಂಬರ್ 16 ಅನ್ನು ಮಹಿಳಾ ಸಂಘಟನೆಗಳು ದೇಶವ್ಯಾಪಿ ಅತ್ಯಾಚಾರ ವಿರೋಧಿ ದಿನವೆಂದು ಆಚರಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಅದೇ ದಿನ ಬೆಳ್ತಂಗಡಿಯ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ ಎಂದರು.
ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಗಾಗಿ ದಶಕಗಳಿಂದ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಸಾಮಾಜಿಕ ಹೋರಾಟಗಾರರು ಸೇರಿ ಕೊಂದವರು ಯಾರು?” ಎಂಬ ರಾಜ್ಯವ್ಯಾಪಿ ಅಭಿಯಾನವನ್ನು ಆಗಸ್ಟ್‌ನಲ್ಲಿ ಪ್ರಾರಂಭಿಸಿದ್ದಾಗಿ ಹೇಳಿದರು.
ಧರ್ಮಸ್ಥಳದಲ್ಲಿ ನಡೆದ ಮಹಿಳಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ಎಸ್‌ಐಟಿ ತನಿಖೆ ರಚನೆ ಮಾಡಿ, ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಹೊಣೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೆಳ್ತಂಗಡಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಹಿಳಾ ಜಾಥಾ ಮಹಿಳಾ ನ್ಯಾಯ ಸಮಾವೇಶ, ಏರ್ಪಡಿಸಲಾಗಿದೆ. ತನಿಖೆ ರಾಜಕೀಯ ಅಥವಾ ಧಾರ್ಮಿಕ ಚರ್ಚೆಗೆ ಒಳಪಡುವಂತಾಗಬಾರದು; ಮಹಿಳಯರು ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಪ್ರಧಾನ ಗುರಿ ಆಗಬೇಕು ಎಂದು ಅಭಿಯಾನ ಸದಸ್ಯೆಯರು ಒತ್ತಾಯಿಸಿದರು.