ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಐತಿಹಾಸಿಕ ಮಹಾರಥೋತ್ಸವ… !

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು.ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಮಾಡಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ ಅವಳಿ ಕಟ್ಟೆಯಲ್ಲಿ ಪೂಜೆ ನಡೆಯಿತು.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿ ಡಾ.ಅರುಣ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿಯ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಸುಜಾತ , ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!