ಉಡುಪಿ: ಮನೆಗೆ ನುಗ್ಗಿ 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಕಳ್ಳನ ಬಂಧನ

ಉಡುಪಿ: ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ್ (37) ಬಂಧಿತ ಆರೋಪಿ.
ನ.30ರಂದು ಚಿಟ್ಪಾಡಿಯ ಶೈಲಾ ವಿಲ್ಲೆಲ್ ಮೀನಾ ಅವರ ಮನೆಗೆ ನುಗ್ಗಿದ ಯಾರೋ ಕಳ್ಳರು ಸುಮಾರು 65.79 ಲಕ್ಷ ಮೌಲ್ಯದ ಸೊತ್ತು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಉಡುಪಿ ನಗರ ಠಾಣೆ ಪೊಲೀಸರು, ಕಿನ್ನಿಮೂಲ್ಕಿ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಕಳ್ಳ ತಾನು ಕದ್ದಿರುವ ಸೊತ್ತುಗಳನ್ನು ಅಜ್ಜರಕಾಡು ಮನೆಯೊಂದರಲ್ಲಿ ಬಚ್ಚಿಟ್ಟಿರುವುದಾಗಿ ತಿಳಿಸಿದ್ದಾನೆ.‌ ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 548.31 ಗ್ರಾಂ ತೂಕದ 65,79,720 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ.


ಆರೋಪಿ ವಿರುದ್ಧ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಉಡುಪಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು 4 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹಿರಿಯಡ್ಕ ಠಾಣೆಯಲ್ಲಿ 03 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಬ್ರಹ್ಮಾವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ ಹಾಗೂ ಮಣಿಪಾಲ್ ಠಾಣೆಯಲ್ಲಿ 1 ಪ್ರಕರಣವು ಮಾನ್ಯ ನ್ಯಾಯಲಯದ ವಿಚಾರಣೆಯಲ್ಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!