ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೇರಿ ಎಲ್ಲಾ ಸಚಿವರು ಮತ್ತು ಶಾಸಕರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಹಾಳುಗೆಡವುತ್ತಿರುವುದರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಚಾರ್ಜ್‌ಶೀಟ್ ಪರಿಗಣಿಸಲು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ ನಿರಾಕರಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಚಾರ್ಜ್​ಶೀಟ್ ಸಲ್ಲಿಸಿತ್ತು.

SHARE
Loading spinner

One thought on “ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

  1. Yo, just checked out hello88vips and it’s pretty dope! The site’s slick and easy to navigate. Definitely worth a look if you’re hunting for some entertainment! Check it out here hello88vips.

    Loading spinner

Leave a Reply

Your email address will not be published. Required fields are marked *

error: Content is protected !!