ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ :ಮಾಜಿ ಸಚಿವ ಬಿ ಎಂ ರಾಮನಾಥ ರೈ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ ಇದನ್ನು ಕಾಂಗ್ರೆಸ್ ಸರಕಾರ ವಿರೋಧಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ.ಎಂದು ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ ಎಂ ರಾಮನಾಥ ರೈ ಕಿಡಿಕಾರಿದರು .

ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಮನರೇಗಾ ಕಾರ್ಯಕ್ರಮದಿಂದ ಅನುಕೂಲವಾಗಿದೆ. ಇದೀಗ ಮಹಾತ್ಮಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು.

ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40 ಪಾಲು ಎಂದು ಹೇಳಿರುವುದು ಈ ಯೋಜನೆಯ ಗಾಂಧೀಜಿ ಹೆಸರು ಬದಲಾವಣೆಯ ಜತೆಗೆ ಯೋಜನೆಯನ್ನು ದುರ್ಬಲಗೊಳಿಸುವ ಯತ್ನವೂ ನಡೆದಿದೆ. ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟವಾಗಿದೆ.ಇತಿಹಾಸವನ್ನು ತಿದ್ದುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಇತಿಹಾಸದ ಪುಟಗಳಿಂದ ಅಳಿಸುವ ಕಾರ್ಯ ನಡೆಯುತ್ತಿದೆ. ಪ್ರಪಂಚದ 80 ದೇಶಗಳಲ್ಲಿ ಗಾಂಧೀಜಿ ಪ್ರತಿಮೆ ಮೂಲಕ ಗೌರವ ಸಲ್ಲಿಸಲಾಗುತ್ತದೆ. ಪ್ರಧಾನಿ ಮೋದಿಯವರು ಬೇರೆ ದೇಶಕ್ಕೆ ಹೋದಾಗ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಾರೆ. ಆದರೆ ದೇಶದಲ್ಲಿ ಅವರ ಹೆಸರನ್ನೇ ಅಳಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರಂ ಶಶಿಧರ ಹೆಗ್ಡೆ ಅಶ್ರಫಂ ಕೆ.ಇ., ಬ್ಲಾಕ್ ಅಧ್ಯಕ್ಷರಾದ ಬಿ.ಎಲ್.ಪದ್ಮನಾಭ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜುಳಾ ನಾಯಕ್, ಮಹಿಳಾ ಮುಂಚೂಣಿ ಘಟಕದ ನಗರ ಅಧ್ಯಕ್ಷೆ ಅಪ್ಪಿ, ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ ಪ್ರಧಾನ ಕಾರ್ಯದರ್ಶಿ ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ದಿನೇಶ್ ಮೂಳೂರ್, ಸಮರ್ಥ್ ಭಟ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

SHARE
Loading spinner

One thought on “ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ :ಮಾಜಿ ಸಚಿವ ಬಿ ಎಂ ರಾಮನಾಥ ರೈ

Leave a Reply

Your email address will not be published. Required fields are marked *

error: Content is protected !!