ಮಂಗಳೂರು: ಮಂಗಳೂರಿನ ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆಯ ವಾರ್ಷಿಕ ಮಹೋತ್ಸವವು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಲಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕ ವಂದನೀಯ ಫಾ| ಸ್ಟೀಫನ್ ಪಿರೇರಾ ಹೇಳಿದರು.
ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಜನವರಿ 14ರಂದು ಸಂಜೆ 6ಕ್ಕೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿದಾರೆ. ಅದೇ ದಿನ ಬೆಳಿಗ್ಗೆ 10ಕ್ಕೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ವಿಶೇಷ ಬಲಿಪೂಜೆಯನ್ನು ನೆರವೇರಿಸಲಿದ್ದಾರೆ ಅಂದರು.
ಜನವರಿ 15ರಂದು ಬೆಳಿಗ್ಗೆ 10.00 ಘಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ದುಮಿಂಗ್ ಡಾಯಸ್ ನಡೆಸಿಕೊಡಲಿದ್ದಾರೆ. ಇದು ಮಕ್ಕಳಿಗಾಗಿ ಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ. ಮಹೋತ್ಸವದ ಸಮಾರೋಪ ಪ್ರಾರ್ಥನಾವಿಧಿ ಸಂಜೆ 6.00 ಘಂಟೆಗೆ ಅತಿ ವಂದನೀಯ ಮೊನ್ಸಿಂಞೆರ್ ಮ್ಯಾಕ್ಸಿಂ ನೊರೊನ್ಹಾ, ಪ್ರಧಾನ ಗುರುಗಳು, ಮಂಗಳೂರು ಧರ್ಮಪ್ರಾಂತ್ಯ ನೇರವೇರಿಸಲಿದ್ದಾರೆ ಅಂದರು.
ಈ ಎರಡು ದಿನದ ವಾರ್ಷಿಕ ಮಹೋತ್ಸವಕ್ಕಾಗಿ ನವದಿನಗಳ ಸಿದ್ಧತೆ – ನವೇನಾ ಪ್ರಾರ್ಥನೆ ಜನವರಿ 5 ರಿಂದ ಜನವರಿ 13 ರ ವರೆಗೆ ನಡೆಯಲಿದೆ. ಆ ದಿನಗಳಲ್ಲಿ ಪ್ರತಿದಿನ 9 ಪ್ರಾರ್ಥನಾ ವಿಧಿಗಳು ನಡೆಯಲಿದೆ. ಬೆಳಿಗ್ಗೆ 6.00, 7.30, 9.00, 10.30 ಹಾಗೂ ಮಧ್ಯಾಹ್ನ 1.00 ಘಂಟೆಗೆ ಕೊಂಕಣಿ ಭಾಷೆಯಲಿ,್ಲ ಸಂಜೆ 4.00 ಘಂಟೆಗೆ ಮಲಯಾಳಂ, 5.00 ಘಂಟೆಗೆ ಇಂಗ್ಲೀಷ್ ಹಾಗೂ 7.45 ಘಂಟೆಗೆ ಕನ್ನಡದಲ್ಲಿ ಬಲಿಪೂಜೆಯು ನಡೆಯಲಿದೆ ಅಂದರು.
ಪ್ರತಿಕಾಗೋಷ್ಠಿಯಲ್ಲಿ ಬಾಲಯೇಸುವಿನ ಪುಣ್ಯಕ್ಷೇತ್ರದ ಗುರುಮಠದ ಮುಖ್ಯಸ್ಥ ವಂದನೀಯ ಫಾ| ಮೆಲ್ವಿನ್ ಡಿಕುನ್ಹಾ,ಕಾರ್ಮೆಲ್ ಸಭೆಯ ವಂದನೀಯ ಫಾ| ದೀಪ್ ಫೆರ್ನಾಂಡಿಸ್, ವಲೇರಿಯನ್ ಫುರ್ಟಾಡೊ, ಬಾಳೊಕ್ ಜೆಜು ಕುಟಮ್ , ವಿಲ್ಫ್ರೆಡ್ ಲಸ್ರಾದೊ ಉಪಸ್ಥಿತರಿದ್ದರು.