ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಅಗ್ನಿಶಾಮಕ ದಳದ ವಾಹನ ಬೆಂಕಿ ಆರಿಸುವ ಕಾರ್ಯಾಚರಣೆ ಮಾಡಿದೆ.