ಬೆಂಗಳೂರು: ದೂರದೃಷ್ಟಿಯ ನಾಯಕ ಮತ್ತು ಶಿಕ್ಷಣ ತಜ್ಞ, ನಿಟ್ಟೆಯ ಎನ್. ವಿನಯ ಹೆಗ್ಡೆಯವರ ನಿಧನದಿಂದ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಮ್ಮ ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.
ಎನ್.ವಿನಯ ಹೆಗ್ಡೆ ಅವರು ತಮ್ಮ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ನಿಟ್ಟೆ ಡೀಮ್ಡ್ ಟು ಬೀ ಯೂನಿವರ್ಸಿಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ಬೆಳೆಸಿದವರು. ಬಡ ವಿದ್ಯಾರ್ಥಿಗಳಿಗೆ, ಮಹಿಳೆಯರ ಸಬಲೀಕರಣಕ್ಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದರು. 24 ಗ್ರಾಮೀಣ ಆಸ್ಪತ್ರೆಗಳನ್ನು ನಡೆಸುತ್ತಿದ್ದರು ಎಂದು ಸ್ಮರಿಸಿದ್ದಾರೆ.
ಉದ್ಯೋಗ ಪತ್ರ ಪ್ರಶಸ್ತಿ, ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರಿಗೆ ಲಭಿಸಿದ್ದವು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬ, ಅಭಿಮಾನಿಗಳಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.