ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಕಾಂಗ್ರೆಸ್ ಸರಕಾರದಿಂದ ಪ್ರಬಲ ಹೋರಾಟ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು:ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು ‘ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025’ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬೊಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು .

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ . ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ . ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್ , ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ . ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು .

ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ . ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ . ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಭೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು .ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿಯದು . ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ . ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು .
ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು .

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ , ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ , ವಿಶ್ವಾಸ್ ಕುಮಾರ್ , ವಿನಯ್ ರಾಜ್ , ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!