ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ ನಡೆಯಿತು.ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ  ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ.

ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿ ಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ.ಅ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು ಅರೆಬೆಟ್ಟು ಗುತ್ತುವಿನ ಮುಖ್ಯಸ್ಥರ ಮುಂದಾಳತ್ವದಲ್ಲಿ ಗ್ರಾಮಸ್ಥರ ಕೂಡುವಿಕೆಯಲ್ಲಿ ಜರಗುತ್ತದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!