ಮಂಗಳೂರು ವಿಶ್ವವಿದ್ಯಾಲಯ ಯಕ್ಷ ಮಂಗಳ ಪ್ರಶಸ್ತಿಗೆ ಡಾ. ರಮಾನಂದ ಬನಾರಿ, ಪ್ರೊಫೆಸರ್ ಎಂಎಲ್ ಸಾಮಗ, ಸಿದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ. ಅಶೋಕ ಹಾಸ್ಯಗಾರರ ದಶರೂಪಕಗಳ ದಶಾವತಾರ ಗ್ರಂಥಕ್ಕೆ ಅತ್ಯುತ್ತಮ ಕೃತಿ ಪ್ರಶಸ್ತಿ.

ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023 24 ನೇ ಸಾಲಿನ ಯಕ್ಷಮಂಗಲ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ಲೇಖಕ, ಸಾಹಿತಿ ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ವಿದ್ವಾಂಸ ಪ್ರೊಫೆಸರ್ ಎಂಎಲ್ ಸಾಮಗ, ಹಿರಿಯ ಬಣ್ಣದ ವೇಷ ದಾರಿ ಸದಾಶಿವ ಶೆಟ್ಟಿ ಸಿದ್ದಕಟ್ಟೆ ಅವರು ಆಯ್ಕೆಯಾಗಿದ್ದಾರೆ

ಹಿರಿಯ ಜಾನಪದ ವಿದ್ವಾಂಸರಾದ ಪ್ರೂ. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರೊ. ಪಾದೆ ಕಲ್ಲು ವಿಷ್ಣುಭಟ್, ಸಂಘಟಕ ಮುರಳಿ ಕಡೆಕಾರ್, ಹಾಗೂ ಕೇಂದ್ರ ದ ನಿರ್ದೇಶಕರಾದ ಡಾ. ರಂಜೇ ಕುಂಬ್ಳೆ ಅವರನ್ನು ಓಳಗೊಂಡಿರುವ ಆಯ್ಕೆ ಸಮಿತಿಯು ಇವರ ಹೆಸರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. ಯಕ್ಷಮಂಗಳ ಪ್ರಶಸ್ತಿಯು 25000 ರೂ ನಗದು, ಪ್ರಶಸ್ತಿ ಪತ್ರ ಸ್ಮರಣಿಕೆ ಹಾಗೂ ಸನ್ಮಾನಗಳನ್ನು ಒಳಗೊಂಡಿದೆ. ಯಕ್ಷಮಂಗಲ ಕೃತಿ ಪ್ರಶಸ್ತಿ ಯು 10000 ರೂ ನಗದು, ಪ್ರಶಸ್ತಿ ಪತ್ರ ಸ್ಮರಣಿಕೆಗಳನ್ನು ಒಳಗೊಂಡಿದೆ.

ಜೂನ್ ತಿಂಗಳಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊಫೆಸರ್ ಪಿಎಲ್ ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಕುಲಸಚಿವರಾದ ಕೆ. ರಾಜು ಮೊಗವಿರ ಹಾಗೂ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!