ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ದೂರುದಾರರಾದ ಜಗದೀಶ ಎಂಬುವವರು ಮೊನ್ನೆ ರಾತ್ರಿ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದರು. ಆಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡುತ್ತಾ, ಕೈಯಿಂದ ಕೆನ್ನೆ, ತಲೆ, ಭುಜ, ಬೆನ್ನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ನೀಡಿದ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ: 08/2026. ಕಲಂ: 115(2), 352, 351(3) BNS-2023 & : 3(1), (r), & (S) the Sc & St (Prevention of atrocities) Amendment act-2015. ನಂತೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.